ಶ್ರೀನಗರ: ಪುಲ್ವಾಮಾದಲ್ಲಿ ಸೈನಿಕರನ್ನು ಉಗ್ರನೊಬ್ಬ ಬಲಿ ತೆಗೆದುಕೊಂಡ ಪ್ರಕರಣದ ಕಾವಿನ್ನೂ ಆರಿಲ್ಲ.  ಇದೀಗ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.

ಪುಲ್ವಾಮಾದ ತ್ರಾಲ್‌ನಲ್ಲಿ ಉಗ್ರರು ಅಡಗಿಕೊಂಡಿದ್ದಾರೆಂಬ ಪೊಲೀಸರ ಖಚಿತ ಮಾಹಿತಿಯನ್ನಾಧರಿಸಿ ಸೇನೆ ಈ ದಾಳಿ ನಡೆಸಿದೆ. ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದ ಉಗ್ರರು ಅಡಗಿಕೊಂಡಿದ್ದ ಮನೆಯನ್ನು ನೆಲಕ್ಕುರುಳಿಸಲಾಗಿದೆ.

ಈ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ. 

ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, ಈ ಘಟನೆಗೆ ಜೈಷೆ ಮೊಹ್ಮದ್ ಹೊಣೆ ಹೊತ್ತಿದೆ. ಇದೇ ದಾಳಿಗೆ ಸೇಡು ತೀರಿಸಿಕೊಂಡ ಭಾರತೀಯ ಸೇನೆ, ಪಾಕಿಸ್ತಾನದ ಬಾಲ್‌ಕೋಟ್‌ನಲ್ಲಿ ಜೈಷೇ ತರಬೇತಿ ಕೇಂದ್ರದ ಮೇಲೆ ಏರ್ ಸ್ಟ್ರೈಕ್ ನಡೆಸಿತ್ತು.

 

 

ಈ ಮಧ್ಯೆ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬ ಅಧಿಕಾರಿ ಹಾಗೂ ಪೊಲೀಸರು ಸೇರಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದರು. ಪುಲ್ಮಾಮಾ ದಾಳಿಯ ಸಂಚುಕೋರ ಎಂದು ಹೇಳಲಾದ ಜೈಷೆ ಮೊಹ್ಮದ್ ಉಗ್ರನೂ 12 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ ಅಸುನೀಗಿದ್ದ.