ನೈಋತ್ಯ ರೈಲ್ವೆಯು ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ-ಬೆಳಗಾವಿ ನಡುವೆ ಎರಡು ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ಬೆಂಗಳೂರು (ಜ.08): ನೈಋತ್ಯ ರೈಲ್ವೆಯು ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ-ಬೆಳಗಾವಿ ನಡುವೆ ಎರಡು ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ಜ.12 ರಂದು ರಾತ್ರಿ 8.15ಕ್ಕೆ ಯಶವಂತಪುರದಿಂದ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 8.10ಕ್ಕೆ ಬೆಳಗಾವಿ ತಲುಪಲಿದೆ. ಇದೇ ರೈಲು ಜ.15 ಸೋಮವಾರ ರಾತ್ರಿ 7.10ಕ್ಕೆ ಬೆಳಗಾವಿಯಿಂದ ಹೊರಟು ಮಂಗಳವಾರ ಬೆಳಗ್ಗೆ 6.20ಕ್ಕೆ ಯಶವಂತಪುರ ತಲುಪಲಿದೆ.
ಜ.25ರಂದು ರಾತ್ರಿ 8.15ಕ್ಕೆ ಯಶವಂತಪುರದಿಂದ ಬೆಳಗಾವಿಗೆ ವಿಶೇಷ ರೈಲು ಸಂಚಾರವಿದ್ದು, ಮರುದಿನ ಬೆಳಗ್ಗೆ 8.10ಕ್ಕೆ ಬೆಳಗಾವಿ ತಲುಪಲಿದೆ. ಇದೇ ರೈಲು ಜ.28ರಂದು ಸಂಜೆ 5.15ಕ್ಕೆ ಬೆಳಗಾವಿಯಿಂದ ಹೊರಟು ಮುಂಜಾನೆ 5 ಗಂಟೆಗೆ ಯಶವಂತಪುರ ತಲುಪಲಿದೆ. ಎರಡೂ ರೈಲುಗಳು ಸಂಚಾರದ ವೇಳೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ದಕ್ಷಿಣ ಹುಬ್ಬಳ್ಳಿ, ಹುಬ್ಬಳ್ಳಿ, ಧಾರವಾಡ, ಲೋಂಡದಲ್ಲಿ ನಿಂತು ಮುಂದೆ ಸಾಗಲಿವೆ.
