'ಪ್ರಿಯಾಂಕ ಅವರು ನಮ್ಮ ಉತ್ತರಪ್ರದೇಶದಲ್ಲಿ ಚುನಾವಣೆ ಪ್ರಚಾರದ ನೇತೃತ್ವ ವಹಿಸಿಕೊಳ್ಳಬೇಕು ಎಂಬ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಎಲ್ಲಿಂದ ಪ್ರಚಾರ ಆರಂಭಿಸಬೇಕು ಎಂಬ ಕುರಿತಂತೆ ಇನ್ನು ನಿಗದಿಯಾಗಿಲ್ಲ'- ಕಾಂಗ್ರೆಸ್ ನಾಯಕ ರಾಜ್ ಬಬ್ಬರ್
ನವದೆಹಲಿ(ನ.18): ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರಿಗೆ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ. 2017ರಲ್ಲಿ ನಡೆಯಲಿರುವ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರದ ನೇತೃತ್ವವನ್ನು ಪ್ರಿಯಾಂಕ ಗಾಂಧಿ ವಹಿಸಲಿದ್ದಾರೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.
'ಪ್ರಿಯಾಂಕ ಅವರು ನಮ್ಮ ಉತ್ತರಪ್ರದೇಶದಲ್ಲಿ ಚುನಾವಣೆ ಪ್ರಚಾರದ ನೇತೃತ್ವ ವಹಿಸಿಕೊಳ್ಳಬೇಕು ಎಂಬ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಎಲ್ಲಿಂದ ಪ್ರಚಾರ ಆರಂಭಿಸಬೇಕು ಎಂಬ ಕುರಿತಂತೆ ಇನ್ನು ನಿಗದಿಯಾಗಿಲ್ಲ' ಎಂದು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ತಿಳಿಸಿದ್ದಾರೆ.
ಇಂದು ಮುಂಜಾನೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಮ್ ನಭೀ ಆಜಾದ್ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿ ಶೀಲಾ ದೀಕ್ಷಿತ್ ಅವರೊಂದಿಗೆ ಪ್ರಿಯಾಂಕ ಗಾಂಧಿ ಮಾತುಕತೆ ನಡೆಸಿದ್ದಾರೆ ಎಂದು ಫೈನಾಶಿಯಲ್ ಎಕ್ಸ್'ಪ್ರೆಸ್ ವರದಿ ಮಾಡಿದೆ.
ಇದೇ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ಪಾತ್ರವೇನು ಎಂಬುದು ಮಾತ್ರ ನಿಗೂಢವಾಗೇ ಉಳಿದಿದೆ. ಇನ್ನೂ ಚುನಾವಣಾ ಚಾಣಕ್ಯ ಎಂದೇ ಬಿಂಬಿತವಾಗಿರುವ ಪ್ರಶಾಂತ್ ಕಿಶೋರ್ ಕೂಡ ಕಾಂಗ್ರೆಸ್'ನಿಂದ ಹೊರ ಬಂದಿದ್ದು ಫಲಿತಾಂಶದ ಮೇಲೆ ಯಾವರೀತಿ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
