ಮುಂದಿನ ವಿಧಾನಸಭೆ ಚುನಾವಣೆಯೇ ನನ್ನ ಕೊನೇ ಚುನಾವಣೆ. ಆ ನಂತರ ಮತ್ತೆ ಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಯಚೂರು (ಡಿ.17): ಮುಂದಿನ ವಿಧಾನಸಭೆ ಚುನಾವಣೆಯೇ ನನ್ನ ಕೊನೇ ಚುನಾವಣೆ. ಆ ನಂತರ ಮತ್ತೆ ಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯರಮರಸ್ ಅತಿಥಿ ಗೃಹದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆಯೇ ನಿವೃತ್ತಿ ಪಡೆಯಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದೆ. ಆದರೆ, ಬಿಜೆಪಿಯವರ ಕೋಮು ಪ್ರಚೋದನೆಗೆ ಕಡಿವಾಣ ಹಾಕಬೇಕೆಂದು ಪುನಃ ಸ್ಪರ್ಧಿಸಲು ನಿರ್ಧರಿಸಿದ್ದೇನೆ.
ಮುಂದಿನ ಚುನಾವಣೆ ಬಳಿಕ ಮತ್ತೆ ಸ್ಪರ್ಧಿಸುವುದಿಲ್ಲ. ಆದರೆ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ವರುಣಾದಿಂದ ನಿಂತರೆ ಹಿನ್ನಡೆಯಾಗುತ್ತದೆ ಎಂಬುದೆಲ್ಲಾ ಸುಳ್ಳು. ರಾಜ್ಯದ 20 ಕ್ಷೇತ್ರಗಳಲ್ಲಿ ನಿಂತು ಗೆಲ್ಲಬಲ್ಲೆ. ಇದು ನನ್ನ ಕೊನೇ ಚುನಾವಣೆಯಾದ ಕಾರಣ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.
