ಗಾಂಧೀನಗರ[ಅ.01]: ಉತ್ತರ ಗುಜರಾತ್​ನ ಬನಸ್ಕಾಂತ ಬಳಿ 70 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 21 ಮಂದಿ ಸಾವನ್ನಪ್ಪಿರುವ ಘಟನೆ  ಘಟನೆ ಸೋಮವಾರ ನಡೆದಿದೆ.  ಈ ಭೀಕರ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.

ಬನಸ್ಕಾಂತ ಜಿಲ್ಲೆಯ ಅಂಬಾಜಿ ನಗರದ, ಅಂಬಾಜಿ ದಾಂತಾ ಮಾರ್ಗದ ಗುಡ್ಡಗಾಡು ರಸ್ತೆಯಾದ ತ್ರಿಶುಲಿಯಾ ಘಾಟ್ ನಲ್ಲಿ ಈ ಭತಯಾನಕ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ಮಾಹಿತಿ ನೀಡಿರುವ ಬನಸ್ಕಾಂತ ಜಿಲ್ಲೆಯ ಪೊಲೀಸ್ ಕಮಿಷನರ್ 'ಖಾಸಗಿ ಬಸ್ ನ್ಲಲಿ ಸುಮಾರು 70 ಮಂದಿ ಪ್ರಯಾಣಿಸುತ್ತಿದ್ದರು. ಈ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಸ್ ಉರುಳಿ ಬಿದ್ದಿದೆ' ಎಂದಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 'ಭೀಕರ ಅಪಘಾತದ ಸುದ್ದಿ ಕೇಳಿ ಆಘಾತವಾಯ್ತು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವವ ಕುರಿತು ಬಹಳ ನೋವಾಗಿದೆ. ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ. ಘಟನೆಯಲ್ಲಿ ಗಾಯಗೊಂಡವರಿಗೆ ಎಲ್ಲಾ ಸವಲತ್ತುಗಳನ್ನು ಸ್ಥಳೀಯ ಆಡಳಿತ ಒದಗಿಸಲಿ' ಎಂದಿದ್ದಾರೆ.