ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್, ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ 21 ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಭುವನೇಶ್ವರ(ಅ.24): ಮಲ್ಕನ್ಗಿರಿ ಅರಣ್ಯದಲ್ಲಿ ನಕ್ಸಲರು-ಯೋಧರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ 21 ನಕ್ಸಲರನ್ನು ಹತ್ಯೆ ಮಾಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್ಸ್ಟೇಬಲ್ಗಳಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್, ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ 21 ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಒಡಿಶಾದ ಮಲ್ಕಗಿರಿಯಿಂದ ಸುಮಾರು 10 ಕಿ.ಮೀ ದೂರದ ಎವೋಬಿ ಎಂಬ ಅರಣ್ಯಪ್ರದೇಶದಲ್ಲಿ ಮಾವೋವಾದಿ ಮುಖಂಡರು ಸಭೆ ನಡೆಸುತ್ತಿದ್ದರು. ಸುಮಾರು 50-60 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗುತ್ತಿದ್ದು, ಏಕಾಏಕಿ ಯೋಧರು ಕ್ಯಾಂಪಿನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ 21 ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರಲ್ಲಿ ಎಕೆ47, ಎಸ್ಎಲ್ಆರ್ ಶಸ್ತ್ರಾಸ್ತ್ರಗಳು ಸೇರಿವೆ ಎಂದು ವರದಿಯಾಗಿದೆ.
