ಶಿಮ್ಲಾ, (ಆ.18): ಹಿಮಾಚಲಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಧಾರಾಕಾರವಾಗಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿ, ಶಿಮ್ಲಾದಲ್ಲಿ ಎಂಟು ಮಂದಿ ಸಾವನ್ನಪ್ಪಿದರೆ, ಕುಲು, ಸಿರ್ಮೌರ್, ಸೋಲನ್ ಹಾಗೂ ಚಂಬಾದಲ್ಲಿ ತಲಾ ಇಬ್ಬರು, ಉನಾ ಮತ್ತು ಲಹೌಲ್- ಸ್ಪಿಟಿ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮುಂದಿನ ಎರಡು ದಿನಗಳ ಕಾಲ ಗುಡುಗು- ಸಿಡಿಲು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಯಲ್ಲಿ ಶಿಮ್ಲಾದಲ್ಲಿ ಸರಕಾರಿ- ಖಾಸಗಿಯ ಎಲ್ಲ ಶಾಲೆ- ಕಾಲೇಜುಗಳಿಗೆ ಸೋಮವಾರದಂದು ರಜಾ ಘೋಷಣೆ ಮಾಡಲಾಗಿದೆ.