ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್ ಪಾಟೀಲ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ.
ಬೆಂಗಳೂರು : ಕಾಂಗ್ರೆಸ್ಸಿನ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್ ಪಾಟೀಲ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ.
ರಾಜ್ಯದ ಒಟ್ಟು 22 ಶಾಸಕರು ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ ಎಂದು ಹೇಳಲಾಗಿದೆ. ಈ 22 ಶಾಸಕರಿಗೂ ಕೂಡ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಅವರೇ ಆತಿಥ್ಯ ನೀಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ 22 ಶಾಸಕರು ಉಳಿದುಕೊಳ್ಳಲು ಕೂಡ ಅವರು ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.
ಆದರೆ, ಇದು ಆಪರೇಷನ್ ಕಮಲವೋ..? ಅಥವಾ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನಕ್ಕಾಗಿ ನಡೆಯುತ್ತಿರೋ ಬಂಡಾಯವೋ ಬಂಡಾಯವೋ ಎನ್ನುವ ಪ್ರಶ್ನೆ ಮೂಡಿದೆ.
ಮುಂಬೈಗೆ ತೆರಳುತ್ತಿರುವವರಲ್ಲಿ ಕಾಂಗ್ರೆಸ್ ನ 18 ಶಾಸಕರು, ಜೆಡಿಎಸ್ 2 ಶಾಸಕರು ಹಾಗೂ ಪಕ್ಷೇತರ 2 ಶಾಸಕರಿದ್ದಾರೆ ಎನ್ನುವ ಮಾಹಿತಿ ಸುವರ್ಣ ನ್ಯೂಸ್ ಡಾಟ್ ಕಾಂಗೆ ಲಭ್ಯವಾಗಿದೆ.
