ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇಲ್ಲಿಯವರೆಗೆ 3107 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2217 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇಲ್ಲಿಯವರೆಗೆ 3107 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2217 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ತಿಳಿಸಿದರು.

ಆಯೋಗದಿಂದ ಹೊರತಂದಿರುವ 2018 ರ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ತಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ಮಹಿಳೆಯರು ಹೇಳಿಕೊಳ್ಳಲು ಭಯಪಡುತ್ತಾರೆ. ಇದರಿಂದ ಅನೇಕ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮುನ್ನೆಲೆಗೆ ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ 2016ರ ನವೆಂಬರ್‌ನಿಂದ 2017ರ ನವೆಂಬರ್‌ವರೆಗೆ ಒಟ್ಟು 3107 ಪ್ರಕರಣಗಳು ದಾಖಲಾಗಿವೆ.

ಅಂದರೆ ಒಂದು ತಿಂಗಳಲ್ಲಿ ಸರಾಸರಿ 230 ವಿವಿಧ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸದ ಸಮಯದಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಸುಮಾರು 72 ಪ್ರಕರಣಗಳು ಕಳೆದ ವರ್ಷ ದಾಖಲಾಗಿದ್ದು, ಕ್ರಮ ಕೈಗೊಳ್ಳಲಾಗಿದೆ ಎಂದರು.