ಭಟ್ಕಳ :  ಪ್ರವಾಸಿಗರ ಟೆಂಪೋ ಟ್ರಾವಲರ್ ಮತ್ತು ಮಿನಿ ಬಸ್  ಮುಖಾಮುಖಿ ಡಿಕ್ಕಿಯಾಗಿ 25ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸಬ್ದತೆ ಕ್ರಾಸ್ ಬಳಿ ಅಪಘಾತವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. 

ಟೆಂಪೋ ಟ್ರಾವಲರ್ ನಲ್ಲಿ ಬೆಂಗಳೂರಿನಿಂದ ಬಂದ ಪ್ರವಾಸಿಗರು ಇಡಗುಂಜಿ, ಮುರುಡೇಶ್ವರಕ್ಕೆ ಪ್ರಯಾಣಿಸುತ್ತಿದ್ದರು. ಇನ್ನು ಮಿನಿ ಬಸ್ ನಲ್ಲಿದ್ದವರು ಭಟ್ಕಳ ಮಾರ್ಗವಾಗಿ ಸಿಗಂದೂರಿಗೆ ಪ್ರಯಾಣ ಬೆಳೆಸಿದ್ದರು. 

ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡ ಮೂವರನ್ನು  ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. 

ಈ ಸಂಬಂಧ ಭಟ್ಕಳ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.