ನವೆಂಬರ್ 2 ರಂದು ರಾಜ್ಯಕ್ಕೆ ಬರ ಅಧ್ಯಯನ ತಂಡ ಆಗಮಿಸಲಿದ್ದು, ಮೂರು ತಂಡಗಳು ಮೂರು ದಿನ ಅಧ್ಯಯನ ನಡೆಸಲಿವೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಬೆಂಗಳೂರು (ಅ.29): ರಾಜ್ಯದಲ್ಲಿ ಹೊಸದಾಗಿ 29 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 139ಕ್ಕೇರಿದೆ.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಇಂದು ಬರ ಕುರಿತ ಸಂಪುಟ ಉಪ ಸಮಿತಿ ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಬರದಿಂದ 12 ಸಾವರಿ ಕೋಟಿ ನಷ್ಟವಾಗಿದ್ದು, ಕೇಂದ್ರದಿಂದ 3330 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಹಾಗೂ ಅತಿವೃಷ್ಠಿಯಿಂದ ಉಂಟಾದ ಹಾನಿಗೆ 336 ಕೋಟಿ ಪರಿಹಾರ ನೀಡುವಂತೆ ಕೇಳಿಕೊಂಡಿದ್ದೇವೆ, ಎಂದಿದ್ದಾರೆ.
ನವೆಂಬರ್ 2 ರಂದು ರಾಜ್ಯಕ್ಕೆ ಬರ ಅಧ್ಯಯನ ತಂಡ ಆಗಮಿಸಲಿದ್ದು, ಮೂರು ತಂಡಗಳು ಮೂರು ದಿನ ಅಧ್ಯಯನ ನಡೆಸಲಿವೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರ ಬರ ಪರಿಹಾರಕ್ಕೆ 350 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಕೆಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಕಾಗೋಡು ಹೇಳಿದ್ದಾರೆ.
