ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರೈಲಿನ ಟ್ರಿಪ್‌ಗಳನ್ನು ಹೆಚ್ಚಳಕ್ಕೆ ಮುಂದಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ), ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದು, ಈ ಹಿಂದಿನ ವೇಳಾಪಟ್ಟಿಯಂತೆಯೇ ಸೇವೆ ಮುಂದುವರಿಸಲು ನಿರ್ಧರಿಸಿದೆ.

ಬೆಂಗಳೂರು (ಜ.06): ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರೈಲಿನ ಟ್ರಿಪ್‌ಗಳನ್ನು ಹೆಚ್ಚಳಕ್ಕೆ ಮುಂದಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ), ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದು, ಈ ಹಿಂದಿನ ವೇಳಾಪಟ್ಟಿಯಂತೆಯೇ ಸೇವೆ ಮುಂದುವರಿಸಲು ನಿರ್ಧರಿಸಿದೆ.

ಸೋಮವಾರದಿಂದ ಎಂದಿನಂತೆ ಟ್ರಿಪ್‌ಗಳನ್ನು ಹೆಚ್ಚಿಸಿ ಸೇವೆ ನೀಡಲಾಗುತ್ತದೆ. ಹೊಸ ವರ್ಷದ ಕೊಡುಗೆಯಾಗಿ ಮೆಟ್ರೋ ನಿಗಮ ಬೈಯಪ್ಪನಹಳ್ಳಿ- ಮೈಸೂರು ರಸ್ತೆ (ನೇರಳೆ ಮಾರ್ಗ) 10 ಟ್ರಿಪ್ ಮತ್ತು ನಾಗಸಂದ್ರದಿಂದ ಯಲಚೇನಹಳ್ಳಿ ಮಾರ್ಗದಲ್ಲಿ (ಹಸಿರು ಮಾರ್ಗ) 3 ಟ್ರಿಪ್ ಸೇರಿ ಒಟ್ಟು 13 ಹೆಚ್ಚುವರಿ ಟ್ರಿಪ್‌ಗಳನ್ನು ಜ.2ರಿಂದ ಪರಿಚಯಿಸಲಾಗಿತ್ತು. ಇದರಿಂದ ‘ಪೀಕ್ ಅವರ್’ನಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲು ಸೇವೆ ಕಲ್ಪಿಸಲಾಗಿತ್ತು. ಆದರೆ, ಪ್ರಸ್ತುತ ಸೌಲಭ್ಯವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಯಿಂದ ಟ್ರಿಪ್‌ಗಳನ್ನು ರದ್ದುಪಡಿಸಲಾಗಿದೆ ಎಂಬ ವಾದವನ್ನು ತಳ್ಳಿಹಾಕಿರುವ ಬಿಎಂಆರ್‌ಸಿಎಲ್ ಅಧಿಕಾರಿಗಳು ಮುಂದಿನ ಮೂರ‌್ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ. ಅಷ್ಟಕ್ಕೂ ವಿದ್ಯುತ್ ಸಮಸ್ಯೆ ಹಿನ್ನೆಲೆಯಲ್ಲಿ ರದ್ದುಗೊಳಿಸಿಲ್ಲ. ವೇಳಾಪಟ್ಟಿಯನ್ನು ಪರಿಷ್ಕರಿಸಿ, ಸೋಮವಾರದಿಂದ ಪುನರಾರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.