ಉತ್ತರ ಪ್ರದೇಶದ ಗೋರಖ್‌‌’ಪುರದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದಾಗಿ 71 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಛತ್ತೀಸ್’ಗಢದಲ್ಲಿ ಅಂತಹುದೇ ಘಟನೆ ನಡೆದಿದ್ದು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ.
ರಾಯಪುರ: ಉತ್ತರ ಪ್ರದೇಶದ ಗೋರಖ್’ಪುರದ ಬಿಆರ್ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 71 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಛತ್ತೀಸ್’ಗಢದಲ್ಲಿ ಅಂತಹುದೇ ಘಟನೆ ನಡೆದಿದ್ದು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ.
ರಾಯಪುರದಲ್ಲಿನ ಡಾ.ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಸ್ಪತ್ರೆಯ ಸಿಬ್ಬಂದಿ ರವಿಚಂದ್ರ ಅವರನ್ನು ಬಂಧಿಸಲಾಗಿದ್ದು, ಕೆಲಸದಿಂದ ಅಮಾನತು ಮಾಡಲಾಗಿದೆ.
ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದ ರವಿಚಂದ್ರ ಅವರು, ಮದ್ಯದ ನಿಶೆಯಲ್ಲಿ ಆಮ್ಲಜನಕ ಪೂರೈಕೆಯನ್ನು ಸ್ಥಗಿತಗೊಳಿಸಿ ನಿದ್ದೆ ಮಾಡಿದ್ದಾರೆ. ಈತ ಮಾಡಿದ ಎಡವಟ್ಟಿನಿಂದ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಛತ್ತೀಸ್’ಗಢ ಮುಖ್ಯಮಂತ್ರಿ ರಮಣ್ಸಿಂಗ್ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವಾರ ಉತ್ತರ ಪ್ರದೇಶದ ಗೋರಖಪುರದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 70 ಮಕ್ಕಳು ಮೃತಪಟ್ಟ ಘಟನೆ ರಾಷ್ಟ್ರವ್ಯಾಪಿ ಚರ್ಚೆಗೆ ಗ್ರಾಸವಾಗಿದೆ.
(ಸಾಂದರ್ಭಿಕ ಚಿತ್ರ)
