ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಅಮೃತಸರದ ನಿರಂಕರಿ ಭವನದ ಮೇಲೆ ದಾಳಿ ನಡೆಸಿದ್ದು, ಬಳಿಕ ಫೈರಿಂಗ್​​​​ ನಡೆಸಿ ಪರಾರಿಯಾಗಿದ್ದಾರೆ.

ಅಮೃತಸರ, [ನ.18] : ಪಂಜಾಬ್​ನ ಅಮೃತಸರದ ನಿರಂಕಾರಿ ಭವನದ ಮೇಲೆ ಅಪರಿಚಿತರು ಗ್ರೆನೇಡ್ ದಾಳಿ ನಡೆಸಿದ್ದಾರೆ. 

ದಾಳಿಯಲ್ಲಿ ಮೂವರು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಅಮೃತಸರದ ನಿರಂಕರಿ ಭವನದ ಮೇಲೆ ದಾಳಿ ನಡೆಸಿದ್ದು, ಬಳಿಕ ಫೈರಿಂಗ್​​​​ ನಡೆಸಿ ಪರಾರಿಯಾಗಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆ. ಉಗ್ರರು ಸ್ಫೋಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸುತ್ತಮುತ್ತ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.