ಶಿವಮೊಗ್ಗ :  ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.  ಸಾಗರದಿಂದ  ಬೆಂಗಳೂರಿಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾಗಿ ಮೂವರು ಸಾವಿಗೀಡಾಗಿದ್ದಾರೆ.   20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಸಾಗರ ಸಮೀಪದ ಉಳ್ಳೂರು ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಕೀರ್ತನಾ, ಸುಜಾತ, ಚಿತ್ರದುರ್ಗ ಜಿಲ್ಲೆಯ ಮಹಮದ್ ಎಂದು ಗುರುತಿಸಲಾಗಿದೆ.  

ಬಸ್ ನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆಯಲಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಇದೇ ಮಾರ್ಗವಾಗಿ ಶಾಸಕ ಹರತಾಳು ಹಾಲಪ್ಪ ಅವರು ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೂಡ ಸ್ಥಳದಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. 

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.