ಮುಂಬೈನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗ್ಗಿನ ಹೊತ್ತು ಅವಘಡ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ನವದೆಹಲಿ(ಸೆ.03): ಮುಂಬೈನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗ್ಗಿನ ಹೊತ್ತು ಅವಘಡ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮುಂಬೈ ಸಮೀಪದ ಉರನ್‌ನಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ಯಲ್ಲಿ ಅವಘಡ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಈ ಬಗ್ಗೆ ONGC ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದೆ.

Scroll to load tweet…

ಸತತ ಎರಡು ಗಂಟೆಗಳ ಕಾರ್ಯಾಚರಣೆ ನಂತರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆರಂಭದಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ ಪ್ಲಾಂಟ್‌ನ ಚರಂಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತೖಲ ನಿಗಮದ ಕಾರ್ಯಾಚರಣೆ ನಡೆಯುವ ಭಾಗದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಅನಿಲವನ್ನು ಗುಜರಾತ್‌ನ ಹಾಝಿರಾ ಪ್ಲಾಂಟ್‌ಗೆ ವರ್ಗಾಯಿಸಲಾಗಿದೆ. ಒಎನ್‌ಜಿಸಿ ಭಾರತದ ತ್ಯಂತ ದೊಡ್ಡ ಕಚ್ಚಾ ತೈಲ ಹಾಗೂ ಅನಿಲ ಸಂಸ್ಕರಣ ಘಟಕವಾಗಿದೆ.

ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಮಹತ್ವದ ದಾಖಲೆಗಳು ಭಸ್ಮ!