ಬೆಂಗಳೂರು[ಆ.29]: ಬಿಜೆಪಿ ಸರ್ಕಾರದ ಮೂವರೂ ಉಪಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್ ಸೌಕರ್ಯ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಉಪಮುಖ್ಯಮಂತ್ರಿಗಳಾದ ಡಾ| ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರು ಈ ಕುರಿತು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು, ತಾವು ಇತರರಂತೆ ಓಡಾಡುತ್ತೇವೆ ಎಂದು ತಿಳಿಸಿದ್ದಾರೆ. ಮತ್ತೊಬ್ಬ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೂ ಇದೇ ತೀರ್ಮಾನ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಕ್ಕೆ ಮೂವರು ಡಿಸಿಎಂ: ಹೈಕಮಾಂಡ್ ವಿರುದ್ಧ BJP ಸಂಸದರೇ ಗರಂ!

ಕಳೆದ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಡಾ| ಜಿ.ಪರಮೇಶ್ವರ್ ಅವರು ಝೀರೋ ಟ್ರಾಫಿಕ್ ಸೌಲಭ್ಯ ಬಳಸುತ್ತಿದ್ದುದರ ಬಗ್ಗೆ ಸಾಕಷ್ಟು ಟೀಕೆ ಟಿಪ್ಪಣಿ ಕೇಳಿಬಂದಿತ್ತು.