ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಮುತ್ಯಾಲನಗರದಲ್ಲಿ ನಡೆದಿದೆ. 

ಬೆಂಗಳೂರು, (ಸೆ.16): ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಮುತ್ಯಾಲನಗರದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶೇಷ ಅವರ ಪತ್ನಿ ಉಷಾ ಹಾಗೂ ಅವರ ತಾಯಿ ಸುಧಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇಂದು ಬೆಳಿಗ್ಗೆ ಸಂಬಂಧಿಕರು ಮನೆ ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಷ ಎಂಬ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಪತ್ನಿ ಹಾಗೂ ತಾಯಿ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಮೂವರ ಮೃತದೇಹಗಳನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.