ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರ IPS IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. 

ಬೆಂಗಳೂರು [ಜು.17] : ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರ ಮಂಗಳವಾರ ಮೂರು ಮಂದಿ ಐಎಎಸ್‌ ಅಧಿಕಾರಿಗಳು ಮತ್ತು ಒಬ್ಬ ಐಪಿಎಸ್‌ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಐಎಎಸ್‌ ಅಧಿಕಾರಿಗಳು: ಡಾ.ರಜನೀಶ್‌ ಗೋಯಲ್‌​-ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಾ.ಜಿ.ಕಲ್ಪನಾ- ಸಾರ್ವಜನಿಕ ಉದ್ಯಮಗಳ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಪಿಲ್‌ ಮೋಹನ್‌- ರಾಜ್ಯ ಪುನರ್ವಸತಿ ಮತ್ತು ಪರಿಹಾರ ಆಯುಕ್ತ ಮತ್ತು ಪದನಿಮಿತ್ತ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ.

ಐಪಿಎಸ್‌ ಅಧಿಕಾರಿ : ಟಿ.ಆರ್‌.ಸುರೇಶ್‌​- ಕಿಯೋನಿಕ್ಸ್‌ ವ್ಯವಸ್ಥಾಪಕ ನಿರ್ದೇಶಕ.