Asianet Suvarna News Asianet Suvarna News

ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಬಿ.ಎಚ್‌.ಅನಿಲ್‌ಕುಮಾರ್‌ ವರ್ಗಾವಣೆಯಾಗಿದ್ದಾರೆ. 

3 IAS Officers Transferred
Author
Bengaluru, First Published Dec 22, 2018, 9:03 AM IST

ಬೆಂಗಳೂರು :  ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಬಿ.ಎಚ್‌.ಅನಿಲ್‌ಕುಮಾರ್‌ ಸೇರಿದಂತೆ ಮೂರು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಡಾ.ಜಿ.ಕಲ್ಪನಾ, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಬಿ.ಎಚ್‌.ಅನಿಲ್‌ಕುಮಾರ್‌ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್‌ ಯೋಜನಾ ನಿರ್ದೇಶಕರಾಗಿ ಡಿ.ಎಸ್‌ ರಮೇಶ್‌ ಅವರನ್ನು ನೇಮಿಸಿ ಆದೇಶಿಸಲಾಗಿದೆ.

Follow Us:
Download App:
  • android
  • ios