ಉತ್ತರಕನ್ನಡ  ಜಿಲ್ಲೆಯ ಕುಮಟ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ಅಸುರಕ್ಷಿತವಾಗಿ ಕಬ್ಬಿಣದ ಕಂಬಿ ಹೊತ್ತೊಯ್ಯುತ್ತಿದ್ದ ಲಾರಿ ಡಿಕ್ಕಿ

ಕುಮಟಾ[ಜು.07]:  ಲಾರಿ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕುಮಟಾ ನಗರದ ಪಾಂಡುರಂಗ ಇಂಟರ್ ನ್ಯಾಷನಲ್ ಹೊಟೇಲ್ ಬಳಿ ಅಸುರಕ್ಷಿತವಾಗಿ ಕಬ್ಬಿಣದ ಕಂಬಿ ಹೊತ್ತೊಯ್ಯುತ್ತಿದ್ದ ಲಾರಿ ಕುಮಟಾದಿಂದ ಗೋರ್ಕಣಕ್ಕೆ ತೆರಳುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.