ಉಟ್ಟಿದ ಸೀರೆಯೊಳಗೆ ಸೀರೆಯಿಟ್ಟು 20 ಸೀರೆ ಕದ್ದ ದಂಪತಿ!

https://static.asianetnews.com/images/authors/b348a094-0bef-5801-a1f6-61e57071185f.jpg
First Published 31, Jul 2018, 12:22 PM IST
3 lakhs saree theft in Bangalore
Highlights

ಆರೋಪಿ ದಂಪತಿ ಕೃತ್ಯ ಎಸಗಿರುವ ದೃಶ್ಯ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ವಿದ್ಯಾರಣ್ಯಪುರ ಪೊಲೀಸರು ಬಲೆ ಬೀಸಿದ್ದಾರೆ

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಬಟ್ಟೆ ಮಾರಾಟ ಮಳಿಗೆ ನುಗ್ಗಿದ ದಂಪತಿ, ದುಬಾರಿ ಬೆಲೆಯ ಸೀರೆಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರದ ನಂಜಪ್ಪ ಸರ್ಕಲ್ ಬಳಿಕ ಶ್ರೀಸಾಯಿ ಸ್ಯಾರಿ ಪ್ಯಾಲೇಸ್‌ನಲ್ಲಿ ನಡೆದಿದೆ.

ಶ್ರೀ ಸಾಯಿ ಸ್ಯಾರಿ ಪ್ಯಾಲೇಸ್‌ನಲ್ಲಿ ಭಾನುವಾರ ಮಧ್ಯಾಹ್ನ ಮಹಿಳಾ ಸಿಬ್ಬಂದಿ ಒಬ್ಬರೇ ಇದ್ದರು. ಇದೇ ವೇಳೆ ಯುವಕನೊಬ್ಬ ಬಂದು ವಿವಿಧ ಮಾದರಿಯ ಸೀರೆಗಳನ್ನು ತೋರಿಸುವಂತೆ ಕೇಳಿದ್ದಾನೆ. ಅದರಂತೆ ಸಿಬ್ಬಂದಿ ತೋರಿಸುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ದಂಪತಿ ದುಬಾರಿ ಮೌಲ್ಯದ ರೇಷ್ಮೆ ಸೀರೆಗಳನ್ನು ತೋರಿಸುವಂತೆ ಕೋರಿದ್ದಾರೆ. ಈ ವೇಳೆ ಮಹಿಳಾ ಸಿಬ್ಬಂದಿ ಹತ್ತಾರು ಸೀರೆಗಳನ್ನು ದಂಪತಿಯ ಮುಂದೆ ಇಟ್ಟಿದ್ದರು. ಮತ್ತೊಂದೆಡೆ ಇದ್ದ ಯುವಕ ತಮಗೂ ಅದೇ ಮೌಲ್ಯದ ಸೀರೆಗಳನ್ನು ತೋರಿಸುವಂತೆ ಹೇಳಿದ್ದಾನೆ. ಆ ವೇಳೆ ಸಿಬ್ಬಂದಿ ಅತ್ತ ಗಮನ ಹರಿಸಿದ್ದಾರೆ. ಈ ವೇಳೆ ದಂಪತಿ ತಮ್ಮ ಕೈ ಚಳಕ ತೋರಿದ್ದಾರೆ. ಈ ಕೃತ್ಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಮಹಿಳೆ ಸುಮಾರು ೨೦ ಸೀರೆಗಳನ್ನು ತಾನು ಧರಿಸಿದ್ದ ಸೀರೆಯೊಳಗೆ ಇಟ್ಟುಕೊಂಡಿದ್ದಾಳೆ. ನಂತರ ಕೆಲ ಸೀರೆಗಳನ್ನು ನೋಡಿ ಮತ್ತೊಮ್ಮೆ ಬರುವುದಾಗಿ ಹೇಳಿ ವಾಪಸ್ ಹೋಗಿದ್ದಾರೆ. ಕೆಲವೇ ಹೊತ್ತಿನಲ್ಲಿ ಯುವಕ ಕೂಡ ಮತ್ತೆ ಬರುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಮಹಿಳಾ ಸಿಬ್ಬಂದಿ ಸೀರೆಗಳನ್ನು ಜೋಡಿಸುವಾಗ, ೨೦ ಸೀರೆಗಳು ಕಳುವಾಗಿರುವುದು ಅವರ ಗಮನಕ್ಕೆ ಬಂದಿದೆ.ಈ ವೇಳೆಗೆ ಮಳಿಗೆಗೆ ಆಗಮಿಸಿದ ಇತರೆ ಸಿಬ್ಬಂದಿಗೆ ಮಹಿಳಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ₹3 ಲಕ್ಷ ಮೌಲ್ಯದ 20 ಸೀರೆಗಳು ಕಳುವಾಗಿದೆ ಎಂದು ಮಳಿಗೆಯ ಮಾಲೀಕರು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

 

loader