ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ತಿನ ಹಾಲಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವು ಮುಖಂಡರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು : ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ತಿನ ಹಾಲಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವು ಮುಖಂಡರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಯತ್ನಾಳ ಅವರಲ್ಲದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ನ ಮಲ್ಲಿಕಾರ್ಜುನ ಖೂಬಾ, ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ ಹಾಗೂ ಮಾಜಿ ಸಚಿವ ನಾಗಪ್ಪ ಸಾಲೋಣಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿಗೆ ಬರಮಾಡಿಕೊಳ್ಳಲಿದ್ದಾರೆ.