ಸರ್ಜಿಕಲ್ ಸ್ಟ್ರೈಕ್ ಬಳಿಕ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದೆ. ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಲೇ ಇದೆ. ಇವತ್ತು ಪಾಕ್ ಪ್ರಾಯೋಜಿತ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲ, ಒಬ್ಬ ಯೋಧನ ದೇಹವನ್ನು ತುಂಡರಿಸಿ ಕ್ರೌರ್ಯ ಮೆರೆದಿದ್ದಾರೆ. ಜಮ್ಮು-ಕಾಶ್ಮೀರದ ಮಚ್ಚಿಲ್ ಸೆಕ್ಟರ್`ನಲ್ಲಿ ಈ ದುಷ್ಕೃತ್ಯ ನಡೆಸಲಾಗಿದೆ
ಶ್ರೀನಗರ(ನ.22): ಸರ್ಜಿಕಲ್ ಸ್ಟ್ರೈಕ್ ಬಳಿಕ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದೆ. ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಲೇ ಇದೆ. ಇವತ್ತು ಪಾಕ್ ಪ್ರಾಯೋಜಿತ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲ, ಒಬ್ಬ ಯೋಧನ ದೇಹವನ್ನು ತುಂಡರಿಸಿ ಕ್ರೌರ್ಯ ಮೆರೆದಿದ್ದಾರೆ. ಜಮ್ಮು-ಕಾಶ್ಮೀರದ ಮಚ್ಚಿಲ್ ಸೆಕ್ಟರ್`ನಲ್ಲಿ ಈ ದುಷ್ಕೃತ್ಯ ನಡೆಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಲೆಫ್ಟಿನೆಂಟ್ ಕರ್ನಲ್ ಬಿಪಿನ್ ರಾವತ್, ಪಾಕಿಸ್ತಾನ ಸೇನೆ ತನ್ನ ದುಷ್ಕೃತ್ಯಕ್ಕೆ ತಕ್ಕ ಬೆಲೆ ತರಲೇಬೇಕು. ಪಾಕ್ ಸೇನೆ ಬಗ್ಗೆ ನಾವು ಯಾವುದೇ ಕರುಣೆ ಇಟ್ಟುಕೊಳ್ಳಲ್ಲ, ಭಾರತೀಯ ಯೋಧರ ಸಾವಿಗೆ ನಾವು ಉತ್ತರ ನೀಡುತ್ತೇವೆ ಎಂದಿದ್ಧಾರೆ.
ಪಾಕ್ ದುಷ್ಕೃತ್ಯದ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಲೆಫ್ಟಿನೆಂಟ್ ಕರ್ನಲ್ ಬಿಪಿನ್ ರಾವತ್ರಿಂದ ಮಾಹಿತಿ ಪಡೆದಿದ್ದಾರೆ.
