ಇರಾನ್ ರಾಜಧಾನಿ ಟೆಹರಾನ್ ನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿ, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ 30 ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಟೆಹರಾನ್ (ಜ.21): ಇರಾನ್ ರಾಜಧಾನಿ ಟೆಹರಾನ್ ನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿ, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ 30 ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಟೆಹರಾನ್ ನ ಪ್ಲಾಸ್ಕೋ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಆದ್ರೆ ಕಾರ್ಯಾಚರಣೆ ನಡೆಯುವಾಗ, ಹೊತ್ತಿ ಉರಿಯುತ್ತಿದ್ದ ಕಟ್ಟಡ ಏಕಾಏಕಿ ಕುಸಿದ ಪರಿಣಾಮ 30 ಮಂದಿ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಇನ್ನೂ ಹೆಚ್ಚಿನ ಜನ ಸಿಲುಕಿರುವ ಸಾಧ್ಯತೆ ಇದ್ದು, ಎರಡು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ.