Asianet Suvarna News Asianet Suvarna News

ಬೆಂಗಳೂರಿನಲ್ಲಿ ಲೇಡಿ ಡಾಕ್ಟರ್ ಆತ್ಮಹತ್ಯೆ: ಕಾರಣ ನಿಗೂಢ

ನೇಣು ಬಿಗಿದುಕೊಂಡು ವೈದ್ಯೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಕಾರಣ ಮಾತ್ರ ನಿಗೂಢವಾಗಿದೆ.

32 Old Lady Doctor commits Suicide In Bengaluru
Author
Bengaluru, First Published Oct 16, 2018, 7:25 PM IST
  • Facebook
  • Twitter
  • Whatsapp

ಬೆಂಗಳೂರು, [ಅ.16]: ನೇಣು ಬಿಗಿದುಕೊಂಡು ವೈದ್ಯೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್‍ನ ಸಾಕಮ್ಮ ಬಡಾವಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಶ್ವಿನಿ (32) ಆತ್ಮಹತ್ಯೆಗೆ ಶರಣಾದ ವೈದ್ಯೆ. ಖಾಸಗಿ ಅಸ್ಪತ್ರೆಯಲ್ಲಿ ಅಶ್ವಿನಿಯವರು ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷದ ಹಿಂದೆ ಡಾ.ಲೋಹಿತ್ ಎಂಬುವರ ಜೊತೆ ಅಶ್ವಿನಿಯವರ ಮದುವೆ ಆಗಿತ್ತು.

ಪತಿಯ ಕಿರುಕುಳದಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಶ್ವಿನಿ ಕುಟುಂಬದವರು ಪತಿ ಲೋಹಿತ್ ಮೇಲೆ ಆರೋಪ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios