ಮಹಿಳೆಯ ಕಾಮದ ತೀಟೆಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಅರೇ. ಅದು ಹೇಗೆ ಸಾಧ್ಯ ಅಂತೀರಾ. ಇಲ್ಲಿದೆ ಫುಲ್ ಡಿಟೇಲ್ಸ್.

ಮುಂಬೈ, [ಅ.16]: ಮಹಿಳೆಯೊಬ್ಬಳ ಲೈಂಗಿಕ ದೌರ್ಜನ್ಯ ತಾಳಲಾರದೆ 38 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಸಚಿನ್ ಮಿಟ್ಕರಿ(38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಚಿನ್ ಪರ್ಭಾನಿಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಆಸ್ಪತ್ರೆಯಲ್ಲಿ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಸೆಕ್ಸ್ ಗಾಗಿ ನಿರಂತರವಾಗಿ ಪೀಡಿಸುತ್ತಿದ್ದಳು. ಇದ್ರಿಂದ ಬೇಸತ್ತ ಸಚಿನ್ ನೇಣಿಗೆ ಶರಣಾಗಿದ್ದಾನೆ.

ಸಚಿನ್‍ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರೀಶಿಲನೆ ನಡೆಸಿದ್ದಾರೆ. ಸಚಿನ ಮೃತಪಟ್ಟ ಜಾಗದಲ್ಲಿ ಒಂದು ಡೆತ್‍ನೋಟ್ ಪೊಲೀಸರಿಗೆ ಸಿಕ್ಕಿದೆ.

 ಮಹಿಳೆಯೊಬ್ಬಳು ನನ್ನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸುತ್ತಿದ್ದಾಳೆ. ಇದನ್ನು ನಿರಾಕರಿಸಿದ್ದಕ್ಕೆ ನನ್ನ ಮೇಲೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಳು ಎಂದು ಡೆತ್‍ನೋಟ್‍ನಲ್ಲಿ ಬರೆಯಲಾಗಿದೆ. ಸದ್ಯ ಪೊಲೀಸರು ಮಹಿಳೆ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.