ಇವರೆಲ್ಲ ಬಾಗಲಕೋಟೆ ಪಟ್ಟಣದ ನಿವಾಸಿಗಳಾಗಿದ್ದು, ಬಳ್ಳಾರಿಯಿಂದ ಬಾಗಲಕೋಟೆಗೆ ಮರಳುತ್ತಿದ್ದ ವೇಳೆ ಅಪಘಾತವಾಗಿದೆ.

ಬಾಗಲಕೋಟೆ(ಡಿ.30): ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೊಲ್ಲಾಪುರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಂಕಜ್(48), ಉಮಾಬಾಯಿ(45), ಪುಷ್ಪಾಬಾಯಿ(67), ಶ್ರೀಕಾಂತಾಬಾಯಿ(65) ಮೃತರು. ಇವರೆಲ್ಲ ಬಾಗಲಕೋಟೆ ಪಟ್ಟಣದ ನಿವಾಸಿಗಳಾಗಿದ್ದು, ಬಳ್ಳಾರಿಯಿಂದ ಬಾಗಲಕೋಟೆಗೆ ಮರಳುತ್ತಿದ್ದ ವೇಳೆ ಅಪಘಾತವಾಗಿದೆ. ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.