ಚಿತ್ರದುರ್ಗದಲ್ಲಿ ಕಾರು-ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ವರು ಸಾವು

4  killed as car rams truck in Chitradurga District
Highlights

  • ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ
  • ಮೃತರು ತಮಿಳುನಾಡು ರಾಜ್ಯದ ಮೂಲದವರು

ಚಿತ್ರದುರ್ಗ[ಜೂ.20]: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ  ಹಿರಿಯೂರು‌ ತಾಲೂಕಿನ ಜವಗೊಂಡನಹಳ್ಳಿ ಬಳಿ ನಡೆದಿದೆ.

ಸದ್ಧಾಂ ಹುಸೇನ್(22), ಸದ್ಧಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20) ಮೃತರು. ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರು ತಮಿಳುನಾಡು ರಾಜ್ಯದ ಮೂಲದವರಾಗಿದ್ದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loader