ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಂದಿಕೊಂಡಂತಿರುವ ಪ್ರಮುಖ ರಸ್ತೆಗಳನ್ನು ಜೋಡಿ ಹೆದ್ದಾರಿಗಳನ್ನಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಂದಿಕೊಂಡಂತಿರುವ ಪ್ರಮುಖ ರಸ್ತೆಗಳನ್ನು ಜೋಡಿ ಹೆದ್ದಾರಿಗಳನ್ನಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ.
ಸುಮಾರು ₹2095 ಕೋಟಿ ವೆಚ್ಚದಲ್ಲಿ 155 ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಇದರಿಂದ ಬೆಂಗಳೂರು ಸುತ್ತಮುಲ್ಲ ಹೆದ್ದಾರಿಗಳ ರಸ್ತೆ ಸಂಚಾರ ಇನ್ನಷ್ಟು ಸುಗಮವಾಗಲಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ಹೇಳಿದರು.
ಬೆಂಗಳೂರಿನಿಂದ ಹೊರಗೆ ಹೋಗುವ ಮತ್ತು ನಗರದ ಒಳಗೆ ಪ್ರವೇಶಿಸುವ ಪ್ರಯಾಣಿಕರಿಗೆ ಉಂಟಾಗುತ್ತಿದ್ದ ಟ್ರಾಫಿಕ್ ಜಾಮ್ ಸಮಸ್ಯೆ ತಡೆಯಲು ಸಂಚಾರ ಸುಗಮ ಮಾಡಲು ಮುಖ್ಯಮಂತ್ರಿ ಅವರು ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದರು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸುತ್ತಮುತ್ತಲ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.
ಹೊಸಕೋಟೆ, ನೆಲಮಂಗಲ, ದೇವನಹಳ್ಳಿ ಸೇರಿದಂತೆ 4 ಪ್ರಮುಖ ರಸ್ತೆಗಳನ್ನು ಜೋಡಿ ರಸ್ತೆಗಳಾಗಿ ಮಾಡಿದರೆ ಸುಮಾರು 155 ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಿದಂತಾಗುತ್ತದೆ. ಈ ಯೋಜನೆಯನ್ನು ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಮೂಲಕ ಜಾರಿಗೊಳಿಸಲಾಗುತ್ತಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದು ಸಚಿವರು ತಿಳಿಸಿದರು
(ಸಾಂದರ್ಭಿಕ ಚಿತ್ರ)
