ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಪ್ರತಿಭಟನೆಯಲ್ಲಿ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ (ಜೂ.06); ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಪ್ರತಿಭಟನೆಯಲ್ಲಿ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಪೊಲೀಸರಾಗಲಿ/ಸಿಆರ್’ಪಿಎಫ್ ಸಿಬ್ಬಂದಿಯಾಗಲಿ ಜನರ ಮೇಲೆ ಗುಂಡು ಹಾರಿಸಿಲ್ಲ. ಪ್ರಾಥಮಿಕ ತನೆಖೆ ನಡೆಯುತ್ತಿದೆ ಎಂದು ಗೃಹ ಸಚಿವ ಭೂಪೇಂದ್ರ ಸಿಂಗ್ ಹೇಳಿದ್ದಾರೆ.

ಇಂದೋರ್, ಉಜ್ಜಯನಿ ಮತ್ತು ದಿವಾಸ್’ನಲ್ಲಿ ಇಂಟರ್’ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಪ್ರತಿಭಟನಾಕಾರರರು ವಾಹನಗಳನ್ನು ಹಾನಿಗೊಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದ್ದು ರೈತರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ರೈತರ ಸಾವಿನ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸನ್ಮಾನ ಕಾರ್ಯಕ್ರಮವನ್ನುಬಿಜೆಪಿ ರದ್ದುಗೊಳಿಸಿದೆ.

(ಸಾಂದರ್ಭಿಕ ಚಿತ್ರ)