ಬಾವಿಯಲ್ಲಿ 4 ಅಪರಿಚಿತ ಶವ ಪತ್ತೆ: ಬೆಚ್ಚಿ ಬಿದ್ದ ಗ್ರಾಮಸ್ಥರು!

4 unidentified bodies found  in well near Kolar
Highlights

ಬಾವಿಯಲ್ಲಿ ನಾಲ್ಕು ಜನ ಅಪರಿಚಿತರ ಶವ ಪತ್ತೆ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಘಟನೆ

ಬೆಟ್ಟಗೇರಹಳ್ಳಿಯ ನಾರಾಯಣಸ್ವಾಮಿ ಅವರಿಗೆ ಸೇರಿದ ಬಾವಿ

ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳ ಶವ ಪತ್ತೆ

ಮುಳವಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ

ಕೋಲಾರ(ಜು.12): ಬಾವಿಯೊಂದರಲ್ಲಿ ಅನುಮಾನಾಸ್ಪದವಾಗಿ ನಾಲ್ಕು ಜನ ಅಪರಿಚಿತರ ಶವ ಪತ್ತೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೆಟ್ಟಗೇರಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ ಬಾವಿಯಲ್ಲಿ ನಾಲ್ಕು ಅಪರಿಚಿತ ಶವ ಪತ್ತೆಯಾಗಿದ್ದು, ಎರಡು ದಿನಗಳ ಹಿಂದೆಯೇ ಈ ಬಾವಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬಾವಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳ ಶವ ದೊರೆತಿದ್ದು, ಮೃತರ ಹೆಸರು ಮತ್ತು ಗುರುತು ತಿಳಿದುಬಂದಿಲ್ಲ.

"

ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಖಚಿತವಾಗಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

loader