ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಜಲ ವಿದ್ಯುತ್ ಯೋಜನೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು 450 ಕೋಟಿ ರೂ ಅಕ್ರಮ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಆಡಿಯೋ ಹಾಗೂ ಇತರ ಸಾಕ್ಷಿಗಳಿವೆ ಹಾಗಾಗಿ ಕಿರಣ್ ರಿಜಿಜು ರಾಜಿನಾಮೆ ಕೊಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ನವದೆಹಲಿ (ಡಿ.13): ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಜಲ ವಿದ್ಯುತ್ ಯೋಜನೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು 450 ಕೋಟಿ ರೂ ಅಕ್ರಮ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಆಡಿಯೋ ಹಾಗೂ ಇತರ ಸಾಕ್ಷಿಗಳಿವೆ ಹಾಗಾಗಿ ಕಿರಣ್ ರಿಜಿಜು ರಾಜಿನಾಮೆ ಕೊಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಈ ಆರೋಪವನ್ನು ತಳ್ಳಿ ಹಾಕಿರುವ ರಿಜಿಜು, ಈ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿರುವವರು ಯಾರು? ಇದು ನಾಚಿಕೆಗೇಡಿನ ಸಂಗತಿ. ಇಂತಹ ಸುದ್ದಿ ಹಬ್ಬಿಸುತ್ತಿರುವವರು ಅಲ್ಲಿಗೆ ಹೋದರೆ ಜನ ಚಪ್ಪಲಿ ಎಸೆಯುತ್ತಾರೆ ಎಂದಿದ್ದಾರೆ.
ಕಿರಣ್ ರಿಜಿಜು ಸಂಬಂಧಿಕ ಗೋಪಿ ರಿಜಿಜು ಈ ಯೋಜನೆಯ ಗುತ್ತಿಗೆಯನ್ನು ಪಡೆದಿದ್ದಾರೆ. ಇವರು 2015 ಡಿಸೆಂಬರ್ ನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿರುವ ಆಡಿಯೋವನ್ನು ಕಾಂಗ್ರೆಸ್ ಬಿಡುಗಡೆ
ಮಾಡಿದೆ. ಇದರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಶೀಘ್ರದಲ್ಲಿಯೇ ಅಧಿಕಾರಕ್ಕೆ ಬರುತ್ತದೆ ಎಂದು ಗೋಪಿ ರಿಜಿಜು ಹೇಳಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.
