ಪ್ರತಿನಿತ್ಯ ಕಿರುಕುಳ ತಾಳಲಾರದೇ ಪತ್ನಿಯೊಬ್ಬಳು ತನ್ನ ಪತಿಯ ತಲೆ ಕತ್ತರಿಸಿ ರುಂಡವನ್ನು ಕೊಂಡೊಯ್ದಿದಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಗುವಾಹಟಿ, [ಮೇ.30]: ಮಹಿಳೆಯೊಬ್ಬಳು ಪತಿಯನ್ನು ಕೊಲೆ ಮಾಡಿ, ರುಂಡವನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ತಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ [55] ಕೊಲೆಯಾದ ಪತಿ. 

Scroll to load tweet…

ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಗುಣೇಶ್ವರಿ ಮುಧಿರಾಮ್ ರುಂಡ ಕತ್ತರಿಸಿದ್ದಾಳೆ.

ಎಂದಿನಂತೆ ಮೇ 20ರಂದು ಮದ್ಯ ಸೇವಿಸಿ ಮನೆಗೆ ಬಂದಿದ್ದ ಮುಧಿರಾಯ್ ಪತ್ನಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಪತಿಯ ವರ್ತನೆ, ಕ್ರೂರತೆಯಿಂದ ಕೋಪಗೊಂಡ ಗುಣೇಶ್ವರಿ ಹಲ್ಲೆ ಮಾಡಿದ್ದಾಳೆ. ಬಳಿಕ ಪತಿಯ ರುಂಡವನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಬಂದಿದ್ದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.