680 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲೂ ಮತದಾನ ನಡೆಯಲಿದ್ದು, ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಲಕ್ನೋ (ಫೆ.23): ರಾಷ್ಟ್ರ ರಾಜಕಾರಣದ ದಿಕ್ಕನ್ನೇ ಬದಲಿಸುವ ಶಕ್ತಿ ಹೊಂದಿರುವ ಉತ್ತರ ಪ್ರದೇಶ ವಿಧಾನಸಭೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ.
12 ಜಿಲ್ಲೆಗಳ 53 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರ ಮತದಾನಕ್ಕಾಗಿ ಆಯೋಗವು ಸಕಲ ರೀತಿಯಲ್ಲಿ ವ್ಯವಸ್ಥೆ ಮಾಡಿದೆ.
680 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲೂ ಮತದಾನ ನಡೆಯಲಿದ್ದು, ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
2012ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷವು 53 ಕ್ಷೇತ್ರಗಳಲ್ಲಿ 24 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಬಹುಜನ ಸಮಾಜ ಪಕ್ಷ 15, ಕಾಂಗ್ರೆಸ್ 6 ಮತ್ತು ಬಿಜೆಪಿ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
ನಾಲ್ಕನೆ ಹಂತ ಚುನಾವಣೆಯಲ್ಲಿ 189 ಕೋಟ್ಯಧಿಪತಿಗಳು ಮತ್ತು 116 ಕ್ರಿಮಿನಲ್ ಹಿನ್ನೆಲೆ ಇರುವ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ. ದೇಶದ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮುಂದಿನ ಮೂರು ಹಂತಗಳಿಗೆ ಫೆ. 27 ಹಾಗೂ ಮಾ.4 ಮತ್ತು 8ರಂದು ಮತದಾನ ನಡೆಯಲಿದೆ. ಮಾ.11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
(ಚಿತ್ರ ಕೃಪೆ: ಶಾರಿಕ್ ನೂರ್, ಆಲ್ ಇಂಡಿಯಾ ರೇಡಿಯೋ)