ಇವರೆಲ್ಲರೂ ಸ್ಕಾರ್ಪಿಯೋ ಕಾರಿನಲ್ಲಿ ಬೆಂಗಳೂರಿನಿಂದ ಕುಣಿಗಲ್'ಗೆ ಹೋಗುತ್ತಿದ್ದಾಗ ಅಪಘಾತವಾಗಿದೆ.
ರಾಮನಗರ (ಅ.19): ಎರಡು ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾ.ಮುತ್ತಗನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಕೆಂಪರಾಜು, ಮಮತಾ, ಸೌಮ್ಯ, ಸಂಜಯ್ ಹಾಗೂ ಚಾಲಕ ಮೃತರು. ಇವರೆಲ್ಲರೂ ಸ್ಕಾರ್ಪಿಯೋ ಕಾರಿನಲ್ಲಿ ಬೆಂಗಳೂರಿನಿಂದ ಕುಣಿಗಲ್'ಗೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
