ಟಂಟಂ- ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ: ಟಂಟಂ- ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರಟಗಿ ತಾಂಡಾ ಬಳಿ ಶುಕ್ರವಾರ ಸಂಜೆ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟಂಟಂ ಚಾಲಕ ಅರವಿಂದ ಅಗಸರ (32), ಸುನಿತಾ ಅಗಸರ (28), ಗಂಗವ್ವ ಬಸಪ್ಪ ಅಗಸರ (49) ಸೃಷ್ಟಿ(6), ವಿನಯಾ (5) ಮೃತಪಟ್ಟವರು. 2 ವರ್ಷದ ಬಾಲಕ ಮಲ್ಲಿಕಾರ್ಜುನ ತೀವ್ರ ಗಾಯಗೊಂಡಿದ್ದು ವಿಜಯಪುರ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೃತರು ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದವರು. ಲಾರಿ ಚಾಲಕನ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣ ಎನ್ನಲಾಗಿದೆ. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.