ಮೃತರು ಬೆಂಗಳೂರಿನ ಬಯ್ಯಪ್ಪನಹಳ್ಳಿ ನಿವಾಸಿಗಳು ಪಾವಗಡದಲ್ಲಿ ನಿಶ್ಚಿತಾರ್ಥ ಮುಗಿಸಿ ವಾಪಸ್ಸಾಗುತ್ತಿದ್ದಾಗ ಘಟನೆ
ತುಮಕೂರು[ಜು.04]: ಜಿಲ್ಲೆಯ ಮಧುಗಿರಿ ಸಮೀಪದ ಕೆರೆಗಳ ಪಾಳ್ಯದಲ್ಲಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಮುರುಳಿ(24) ಮಂಜುನಾಥ್ (20) ರಾಮ್ ಮೋಹನ್ (22), ಶಿವಪ್ರಸಾದ್ (23),ದಿನೇಶ್ (26) ಮೃತರು. ಎಲ್ಲರೂ ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳಾಗಿದ್ದು ಪಾವಗಡದಲ್ಲಿ ನಿಶ್ಚಿತಾರ್ಥ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
