ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 4 ಲಕ್ಷ ರೂ. ಹಾಗೂ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1 ಲಕ್ಷ ರೂ. ಪರಿಹಾರ ವಿತರಿಸಲು ಸಿಎಂ ಸೂಚಿಸಿದ್ದಾರೆ.

ಬೆಂಗಳೂರು(ಅ.05): ಪಿರಿಯಾಪಟ್ಟಣದ ನಂದಿನಾಥಪುರದಲ್ಲಿ ಸಿಡಿಲು ಬಡಿದು ಮೃತರಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ವಿತರಿಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 4 ಲಕ್ಷ ರೂ. ಹಾಗೂ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1 ಲಕ್ಷ ರೂ. ಪರಿಹಾರ ವಿತರಿಸಲು ಸಿಎಂ ಸೂಚಿಸಿದ್ದಾರೆ. ಟ್ವಿಟರ್'ನಲ್ಲಿ ಈ ಬಗ್ಗೆ ತಿಳಿಸಿರುವ ಅವರು, ಸಿಡಿಲು ಬಡಿದು ಪಿರಿಯಾಪಟ್ಟಣದ ನಂದಿನಾಥಪುರದಲ್ಲಿ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನೋವು ತಂದಿದೆ. ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ' ಎಂದು ತಿಳಿಸಿದ್ದಾರೆ.