ಏಪ್ರಿಲ್ 1 ರಿಂದ, ಎಸ್ಬಿಐ ಬ್ಯಾಂಕ್ ಜೊತೆ 5 ಬ್ಯಾಂಕ್ಗಳು ವಿಲೀನಗೊಳ್ಳಲಿವೆ. ಇದರಿಂದ ಏನೆಲ್ಲಾ ಲಾಭಗಳಿವೆ ಎನ್ನುವುದನ್ನು, ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾದ ಚೀಫ್ ಜನರಲ್ ಮ್ಯಾನೇಜರ್ ಆಗಿರುವ ಫಾರೂಕ್ ಶಾಹೇಬ್, ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಆ ಎಕ್ಸ್ಕ್ಲೂಸಿವ್ ಮಾಹಿತಿ ಇಲ್ಲಿದೆ.
ನವದೆಹಲಿ(ಮಾ.25): ಏಪ್ರಿಲ್ 1 ರಿಂದ, ಎಸ್ಬಿಐ ಬ್ಯಾಂಕ್ ಜೊತೆ 5 ಬ್ಯಾಂಕ್ಗಳು ವಿಲೀನಗೊಳ್ಳಲಿವೆ. ಇದರಿಂದ ಏನೆಲ್ಲಾ ಲಾಭಗಳಿವೆ ಎನ್ನುವುದನ್ನು, ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾದ ಚೀಫ್ ಜನರಲ್ ಮ್ಯಾನೇಜರ್ ಆಗಿರುವ ಫಾರೂಕ್ ಶಾಹೇಬ್, ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಆ ಎಕ್ಸ್ಕ್ಲೂಸಿವ್ ಮಾಹಿತಿ ಇಲ್ಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ದೇಶದ ಅತಿ ದೊಡ್ಡ ಬ್ಯಾಂಕ್ ಎನ್ನುವ ಖ್ಯಾತಿ ಗಳಿಸಿದೆ. ಈ ಬ್ಯಾಂಕ್ ಜೊತೆ ಏಪ್ರಿಲ್ 1 ರಿಂದ 5 ಬ್ಯಾಂಕ್'ಗಳು ವಿಲೀನಗೊಳ್ಳಲಿವೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ, ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ್, ಎಸ್ಬಿಐನಲ್ಲಿ ವಿಲೀನಗೊಳ್ಳಲಿವೆ.
ಜನರಿಗೆ ಉತ್ತಮ ಸೇವೆ ನೀಡುವಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ನಿರುದ್ಯೋಗಿಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತಿದ್ದು, ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುಲು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ.
5 ಬ್ಯಾಂಕ್ಗಳು ಎಸ್ಬಿಐನಲ್ಲಿ ವಿಲೀನಗೊಂಡರೆ, ಅದರ ಆಸ್ತಿ ಮೌಲ್ಯ 37 ಲಕ್ಷ ಕೋಟಿಯಷ್ಟಾಗಲಿದೆ. ಮತ್ತಷ್ಟು ವಿಸ್ತೃತವಾಗಿ ಗ್ರಾಹಕ ಸ್ನೇಹಿಯಾಗಲಿದ್ದು, ಜನರಿಗೆ ಉತ್ತಮ ಸೇವೆ ನೀಡಲು ಈ ವಿಲೀನ ಪ್ರಕ್ರಿಯೆ ಅನುಕೂಲವಾಗಲಿದೆ.
