ನವದೆಹಲಿ (ಡಿ. 04): ಶೀಘ್ರದಲ್ಲೇ ವಿಧಾನಸಭೆ ಅವಧಿ ಪೂರ್ಣಗೊಳ್ಳಲಿರುವ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ಚುನಾವಣೆಯನ್ನು 2019ರ ಲೋಕಸಭಾ ಚುನಾವಣೆ ವೇಳೆಯೇ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಲ್ಲದೆ, ರಾಜಕೀಯ ಬಿಕ್ಕಟ್ಟಿನ ಪರಿಣಾಮ ವಿಧಾನಸಭೆ ವಿಸರ್ಜಿಸಲಾದ ಜಮ್ಮು-ಕಾಶ್ಮೀರದಲ್ಲಿಯೂ ಇದೇ ವೇಳೆ ವಿಧಾನಸಭೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಪಂಚ ರಾಜ್ಯಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಹಮ್ಮಿಕೊಂಡರೆ, ಭದ್ರತಾ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಆಯೋಗ ಪ್ರತಿಪಾದಿಸಿದೆ.