ಮೋದಿ ಮತ್ತಷ್ಟು ವರ್ಷ ಅಧಿಕಾರದಲ್ಲಿರಬೇಕು : ಯದುವೀರ್‌

5 Years are Not Enough for PM Modi for Development Says  Yaduveer
Highlights

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಕಷ್ಟುಕೊಡುಗೆ ನೀಡಿದೆ. ಆ ಎಲ್ಲ ಕೆಲಸ ಪೂರ್ಣಗೊಳ್ಳಲು ಮತ್ತಷ್ಟುವರ್ಷ ಅವರು ಅಧಿಕಾರದಲ್ಲಿರಬೇಕು ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಕಷ್ಟುಕೊಡುಗೆ ನೀಡಿದೆ. ಆ ಎಲ್ಲ ಕೆಲಸ ಪೂರ್ಣಗೊಳ್ಳಲು ಮತ್ತಷ್ಟುವರ್ಷ ಅವರು ಅಧಿಕಾರದಲ್ಲಿರಬೇಕು ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಶನಿವಾರ ಅರಮನೆಗೆ ತೆರಳಿ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಯ ಪುಸ್ತಕ ನೀಡಿದ ಬಳಿಕ ಪ್ರತಿಕ್ರಿಯಿಸಿದ ಯದುವೀರ, ಕೇಂದ್ರ ಸರ್ಕಾರ 4 ವರ್ಷದಲ್ಲಿ ಸಾಕಷ್ಟುಕೆಲಸ ಮಾಡಿದೆ. 

ಆ ಕೆಲಸಗಳನ್ನು ಸಂಪೂರ್ಣಗೊಳಿಸಲು ಅವರಿಗೆ 5 ವರ್ಷ ಸಾಲುವುದಿಲ್ಲ. ಮತ್ತಷ್ಟುವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರದಲ್ಲಿರಬೇಕು. ಆಗ ಮಾತ್ರ ಕೆಲಸಗಳು ಸಂಪೂರ್ಣಗೊಳ್ಳುತ್ತವೆ. ಆದ್ದರಿಂದ ನಾವೆಲ್ಲರೂ ಒಳ್ಳೆಯ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು ಎಂದರು.

loader