ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ತಲೆಗಳು ಉರುಳುತ್ತಲೇ ಇವೆ. ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ 50 ರೌಡಿಗಳನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. 

ಲಖನೌ: ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ತಲೆಗಳು ಉರುಳುತ್ತಲೇ ಇವೆ. ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ 50 ರೌಡಿಗಳನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. 

ಮೇ 3ರಂದು ಕುಖ್ಯಾತ ಕ್ರಿಮಿನಲ್ ರೆಹಾನ್ ಎಂಬಾತನನ್ನು ಮುಜಫ್ಫರ್‌ನಗರ ಜಿಲ್ಲೆಯಲ್ಲಿ ಎನ್‌ಕೌಂಟರ್ ಮಾಡಲಾಗಿದ್ದು, ಈತ ಎನ್‌ಕೌಂಟರ್‌ನಲ್ಲಿ ಬಲಿಯಾದ 50ನೇ ವ್ಯಕ್ತಿ. 

ಅಲ್ಲದೇ 3,435 ರೌಡಿ ಶೀಟರ್‌ಗಳ ನ್ನು ಜೈಲಿಗೆ ಕಳುಹಿಸಲಾಗಿದೆ. ದುಷ್ಕರ್ಮಿಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ೩೦೮ ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ.