ಭೋಪಾಲ್(ಅ.02): ಗಡಿ ನಿಯಂತ್ರಣ ರೇಖೆ ದಾಟಿ ಉಗ್ರರ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ದಿಟ್ಟ ನಿರ್ಧಾರವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಶ್ಲಾಘಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಚೌಹ್ಹಾಣ್, ಉಗ್ರರ ಮೇಲೆ ಸರ್ಜಿಕಲ್ ದಾಳಿ ನಡೆಸುವ ಮೂಲಕ ಮೋದಿಯವರ 56 ಇಂಚಿನ ಎದೆ ಈಗ 100 ಇಂಚಿಗೆ ವಿಸ್ತಾರಗೊಂಡಿದೆ ಎಂದು ಹೇಳಿದ್ದಾರೆ.

ಭಾರತೀಯ ಸೇನೆಗೆ ಹಾಗೂ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ನಮ್ಮ ಬೆಳವಣಿಗೆ ದರ ಚೀನಾಗಿಂತಲೂ ಮುಂದಿದೆ. ಇವೆಲ್ಲವೂ ಭಾರತ ಬಲಿಷ್ಟಗೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಚೌಹ್ಹಾಣ್ ಹೇಳಿದ್ದಾರೆ.

ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವು ಅಭಿವೃದ್ದಿಯ ಪಥದತ್ತ ಮುನ್ನೆಡೆಯುತ್ತಿದೆ ಎಂದು ಹೇಳಿದ್ದಾರೆ. ಇನ್ನು ದೇಶದಲ್ಲಿ ಮಧ್ಯಪ್ರದೇಶ ಸರ್ಕಾರ ಕೃಷಿಯಲ್ಲಿ ಉತ್ತಮ ಬೆಳವಣಿಗೆ ದರ ಹೊಂದಿದೆ. ಇದು ಜಗತ್ತಿನ ಕೃಷಿ ಬೆಳವಣಿಗೆ ದರಕ್ಕೆ ಹೋಲಿಸಿದರೂ ನಮ್ಮ ರಾಜ್ಯ ಮುಂದಿದೆ ಎಂದು ಚೌಹ್ಹಾಣ್ ಹೇಳಿದ್ದಾ