ಪ್ರತಿಭಟನಾಕಾರರು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ, ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ವಿರುದ್ದ ತೀರ್ವ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಲ್ಲಿ ರಾಜ್ಯದ ಬಿಜೆಪಿ ನಾಯಕರು ವಿಫಲರಾಗಿದ್ದಾರೆ.
ಧಾರವಾಡ(ಏ.15): ನವಲಗುಂದ-ನರಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟ - 640 ದಿನ ಪೂರೈಸಿದ ಮಹಾದಾಯಿ, ಕಳಸಾ-ಬಂಡೂರಿ ಹೋರಾಟ.
ಪ್ರತಿಭಟನಾಕಾರರು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ, ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ವಿರುದ್ದ ತೀರ್ವ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಲ್ಲಿ ರಾಜ್ಯದ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಗೋವಾದಲ್ಲಿ ಬಿಜೆಪಿ ಆಡಳಿತ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದು, ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ.
