ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ತಮ್ಮ  ಹಕ್ಕು ಚಲಾಯಿಸಿದ್ದರು.

ಗಾಂಧಿನಗರ(ಡಿ.14): ಗುಜರಾತ್'ನ 93 ಕ್ಷೇತ್ರಗಳಿಗೆ ನಡೆದ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.68.70 ರಷ್ಟು ಮತದಾನವಾಗಿದೆ. ಡಿ.9 ರಂದು 89 ಸ್ಥಾನಗಳಿಗೆ ಮೊದಲ ಹಂತದ ನಡೆದ ಚುನಾವಣೆಯಲ್ಲಿ 89 ಸ್ಥಾನಗಳಿಗೆ ಮತದಾನ ನಡೆದಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಅರುಣ್ ಜೇಟ್ಲಿ ಸೇರಿದಂತೆ ಹಲವು ಗಣ್ಯರು ಇಂದು ತಮ್ಮ ಹಕ್ಕು ಚಲಾಯಿಸಿದ್ದರು. ಡಿ.18ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಗುಜರಾತ್ ಹಾಗೂ ಹಿಮಾಚಲಪ್ರದೇಶ ರಾಜ್ಯಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.