ನಾಲ್ಕು ಜನ ಕಾಲೇಜು ವಿದ್ಯಾರ್ಥಿಗಳನ್ನು ನಿಸರ್ಗಕ್ಕೆ ವಿರುದ್ಧವಾದ ರೀತಿಯಲ್ಲಿನ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ  ಏಳು ಜನರನ್ನು ಬಂಧಿಸಲಾಗಿದೆ.

ಬೆಗುಸರಾಯ್[ಅ.29] ನಿಸರ್ಗಕ್ಕೆ ವಿರುದ್ಧವಾದ ರೀತಿಯ ಲೈಂಗಿಕ ಕ್ರಿಯೆಗೆ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆದ ಮೇಲೆ ಪೊಲೀಸರು ದಿಟ್ಟ ಕ್ರಮ ತೆಗೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಫೋಖರಿಯಾ ಪ್ರದೇಶದ ಕುಸ್ವಾಲಾ ವಿದ್ಯಾರ್ಥಿ ನಿಲಯದ ಮಕ್ಕಳ ಮೇಲೆ ನಡೆದ ದೌರ್ಜನ್ಯದ ವಿಡಿಯೋ ವೈರಲ್ ಆಗಿತ್ತು. 18-21 ವರ್ಷದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಮದ್ಯ ಕುಡಿಸಿ ಅವರನ್ನು ಕಾಮ ತೃಷೆಗೆ ಬಳಸಿಕೊಳ್ಳುತ್ತಿದ್ದರು.

ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು ಮಾಹಿತಿ ಕಲೆ ಹಾಕಿದ ಪೊಲೀಸರು ಹತ್ತಿರದ ಅರಣ್ಯದಲ್ಲಿ ಈ ಅನಾಚಾರ ನಡೆಯುತ್ತಿದೆ ಎಂಬುದನ್ನು ಮನಗಂಡಿದ್ದಾರೆ. ಸಮಯ ನೋಡಿ ದಾಳಿ ಮಾಡಿದ್ದು 7 ಜನರನ್ನು ಬಂಧಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.