ಶಾಲಾ ಬಸ್ ಹಾಗೂ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಾಲಕ ಹಾಗೂ 7 ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. 

ಸತ್ನಾ : ಶಾಲಾ ಬಸ್ ಹಾಗೂ ವ್ಯಾನ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಹಾಗೂ ಶಾಲಾ ಬಸ್ ಡ್ರೈವರ್ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಸತ್ನಾದಲ್ಲಿ ನಡೆದಿದೆ. 

ಅಲ್ಲದೇ ಈ ಘಟನೆ ವೇಳೆ 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 

ಈ ಘಟನೆ ಸಂಬಂಧ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಇದೊಂದು ಅತ್ಯಂತ ದುಃಖಕರ ಸಂಗತಿಯಾಗಿದ್ದು , ಅವರ ಕುಟುಂಬಕ್ಕೆ ಭಗವಂತ ದುಃಖ ತಡೆವ ಶಕ್ತಿ ನೀಡಲಿ, ಗಾಯಗೊಂಡ ಮಕ್ಕಳು ಶಿಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.