ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ರಾಜ್ಯದ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. 

ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ 70 ಡಿವೈಎಸ್ಪಿ ಅಥವಾ ಎಸಿಪಿ ಹಾಗೂ 387 ಇನ್ಸ್‌ಪೆಕ್ಟರ್‌ಗಳನ್ನು ಮೊದಲಿದ್ದ ಸ್ಥಳಕ್ಕೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. 

ಈ ಆದೇಶದಂತೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಲೋಕಸಭಾ ಚುನಾವಣೆಗೂ ಮುನ್ನ ಕರ್ತವ್ಯ ನಿರ್ವಹಿಸುತ್ತಿದ್ದ ಹುದ್ದೆಗಳಿಗೆ ಮರು ವರ್ಗಾವಣೆಗೊಂಡಿದ್ದಾರೆ.