ಮೈಸೂರು [ಜೂ.18] : ಶಾಸಕ ತನ್ವೀರ್ ಸೇಠ್ ಅವರಿಗೆ ಮಂತ್ರಿ ಸ್ಥಾನ  ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಟ್ಟು 70 ಮಂದಿ ಕಾಂಗ್ರೆಸ್ ಪದಾಧಿಕಾರಿಗಳ ನಿಯೋಗ ಕೆಪಿಸಿಸಿ ಕಚೇರಿಗೆ ತೆರಳಿ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. 

ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರಾದ ಮೈಸೂರಿನ 5 ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ಮಂಚೂಣಿ ಘಟಕದ ಅಧ್ಯಕ್ಷರು, 23 ವಾರ್ಡ್ ಅಧ್ಯಕ್ಷರು ರಾಜೀನಾಮೆಗೆ ಮುಂದಾಗಿದ್ದಾರೆ. 

ಒಟ್ಟು ಐದು ಬಾರಿ ತನ್ವೀರ್ ಸೇಠ್ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಸರ್ಕಾರದಲ್ಲಿ ಒಂದೂವರೆ ವರ್ಷಗಳ ಕಾಲ ಶಿಕ್ಷಣ ಮಂತ್ರಿಯಾಗಿ ಕೆಲಸ ಮಾಡಿರುವ ಅನುಭವವಿದೆ ಎಂದಿದ್ದಾರೆ. 

ತನ್ವೀರ್ ಸೇಠ್ ಅವರಿಗೆ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದೇ ಇದ್ದಲ್ಲಿ ಅವರ ಬೆಂಬಲಿಗರು ಯಾರೂ ಪಕ್ಷದಲ್ಲಿ ಮುಂದುವರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.